August 21, 2025
IMG-20250820-WA0404

ಮಂಗಳೂರು: ಕಡಬ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಬಹುಮತ ಪಡೆದಿದ್ದು, ವಿಜಯಿ ಅಭ್ಯರ್ಥಿಗಳಿಗೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಶೀರ್ ಅವರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪುದು ಗ್ರಾಮ ಪಂಚಾಯತ್ ಸದಸ್ಯ ಹಿಶಾಮ್ ಫರಂಗಿಪೇಟೆ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಭಿಲಾಶ್, ಹಿರಿಯ ಕಾಂಗ್ರೆಸ್ ಮುಖಂಡರಾದ ಎಂ ಯಸ್ ಮುಹಮ್ಮದ್, ನ್ಯಾಯವಾದಿಗಳಾದ ನೂರುದ್ದೀನ್ ಸಾಲ್ಮರ,ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಾಕಿರ್ ಪಿಲ್ಯ, ಎನ್ ಎಸ್ ಯು ಐ ಮುಖಂಡರಾದ ಫಾಯಿಜ್ , ತೌಫೀಕ್ ನೆಲ್ಯಾಡಿ, ಚೇತನ್ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆದಿದೆ.

ಒಟ್ಟು 13 ಸದಸ್ಯ ಬಲದ ಈ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್‌ 8 ಹಾಗೂ ಬಿಜೆಪಿ 5 ಸ್ಥಾನ ಪಡೆದಿವೆ.