February 4, 2026
parameshwara1-415x275

ಬೆಂಗಳೂರು: ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ ಶಾಕ್‌ ನೀಡಿದೆ. ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ.

ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್‌ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ.

9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ನಾಲ್ಕು ವರ್ಷದ ಹಿಂದೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.