March 22, 2026
bhXA-qKU_400x400

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸುವಂತೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು.
ಇದೀಗ ರಕ್ಷಿತ್ ಶಿವರಾಂ ಅವರ ಹೇಳಿಕೆಯನ್ನು ವಿರೋಧಿಸಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ರಾಷ್ಟ್ರ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ದೂರು ನೀಡಲಾಗಿದೆ.