August 21, 2025
tommoamithameet

ಲಕ್ನೋ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಜಲಾಲಾಬಾದ್ ಪಟ್ಟಣವನ್ನು `ಪರಶುರಾಮಪುರಿ’ ಎಂದು ಮರುನಾಮಕರಣ ಮಾಡಲಾಗಿದೆ.ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಬಾಲ್ಯವಿವಾಹ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್

ಈ ಕುರಿತು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಅವರು ಹೆಸರು ಬದಲಾಯಿಸುವ ವಿಚಾರವಾಗಿ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿ, ಅನುಮೋದಿಸುವಂತೆ ಒತ್ತಾಯಿಸಿ ಪತ್ರದಲ್ಲಿ ಉಲ್ಲೇಖಿಸಿದ್ದರು. ಸದ್ಯ ಗೃಹ ಸಚಿವ ಅಮಿತ್ ಶಾ ಅವರು ಪಟ್ಟಣದ ಮರುನಾಮಕರಣಕ್ಕೆ ಅನುಮೋದನೆ ನೀಡಿದ್ದಾರೆ.

ಮೂಲಗಳ ಪ್ರಕಾರ, ಯುಪಿ ಸರ್ಕಾರವು ಗೃಹ ಸಚಿವಾಲಯಕ್ಕೆ ಸಲ್ಲಿಸಿದ ಪತ್ರದಲ್ಲಿ, ಜಲಾಲಾಬಾದ್ ಪಟ್ಟಣವು ದೈವಿಕ ಸಂತ ಭಗವಾನ್ ಪರಶುರಾಮರ ಜನ್ಮಸ್ಥಳ ಎಂದು ಕರೆಯಲ್ಪಡುತ್ತಿತ್ತು. ಈ ಪ್ರದೇಶದಲ್ಲಿ ಪರಶುರಾಮರ ಪ್ರಾಚೀನ ದೇವಾಲಯವಿತ್ತು ಎಂದು ತಿಳಿಸಿತ್ತು.