ತುಮಕೂರು: ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ ಕ್ಯಾತಸಂದ್ರ ಬಳಿಯ ಜಾಸ್ ಟೋಲ್ ಬಳಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ನಗರದಲ್ಲಿ ಇಂದು ಹಿಂದೂ ಮಹಾಗಣಪತಿ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚರ್ಚ್ ವೃತ್ತದ ಬಳಿ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಿತ್ತು. ಪುನೀತ್ ಕೆರೆಹಳ್ಳಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿದೆ.
ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ತುಮಕೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.