December 21, 2024
star191024_1

ದುಬೈ : ತುಂಬೆ ಫಿಸಿಕಲ್ ಥೆರಪಿ ಹಾಗೂ ರಿಹ್ಯಾಬಿಲಿಟೇಶನ್ ಆಸ್ಪತ್ರೆ ವತಿಯಿಂದ ಆಲೈಡ್ ಹೆಲ್ತ್ ಕೇರ್ ಕೌನ್ಸಿಲ್ ಕರ್ನಾಟಕ ಇದರ ಅಧ್ಯಕ್ಷ ಡಾ| ಯು. ಟಿ. ಇಫ್ತಿಕಾರ್ ಅಲಿ ಅವರಿಗೆ ಪ್ರತಿಷ್ಠಿತ ‘ ಸ್ಟಾರ್ ಆಫ್ ದಿ ಇಯರ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಜ್ಮಾನ್ ನಲ್ಲಿರುವ ತುಂಬೆ ಮೆಡಿಸಿಟಿಯಲ್ಲಿ ಜರಗಿದ ನಾಲ್ಕನೇ ಅಂತರರಾಷ್ಟ್ರೀಯ ವಾರ್ಷಿಕ ಸಮಾವೇಶದಲ್ಲಿ ಈ ಪ್ರಶಸ್ತಿ ನೀಡಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಇಫ್ತಿಕಾರ್ ಅಲಿ, ಆರೋಗ್ಯ ಮತ್ತು ಶಿಕ್ಷಣವನ್ನು ಸುಧಾರಿಸುವಲ್ಲಿ ನನ್ನ ಪ್ರಯತ್ನಗಳನ್ನು ಮುಂದುವರಿಸಲು ಇದು ಪ್ರೇರಣೆಯಾಗಿದೆ. ನಾವೆಲ್ಲರೂ
ಒಟ್ಟಾಗಿ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ರೂಪಿಸಬಹುದಾಗಿದೆ ಎಂದು ಹೇಳಿದ್ದಾರೆ.

ಯುಎಇಯ ಅಜ್ಮಾನಿನ ತುಂಬೆ ಮೆಡಿಸಿಟಿಯಲ್ಲಿ ನಡೆದ Innovation in Rehabilitation Practice and Medicine ಕುರಿತ 4ನೇ ಅಂತರಾಷ್ಟ್ರೀಯ ವಾರ್ಷಿಕ ಸಮ್ಮೇಳನದಲ್ಲಿ ಅವರನ್ನು ಗೌರವಿಸಲಾಯಿತು. ಆರೋಗ್ಯ ರಕ್ಷಣೆಯಲ್ಲಿನ ಪ್ರಗತಿಯನ್ನು ಚರ್ಚಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ವೃತ್ತಿಪರರು, ಸಂಶೋಧಕರು ಮತ್ತು ಉದ್ಯಮಿಗಳು ಭಾಗವಹಿಸಿದ್ದರು. ಅಜ್ಮಾನಿನ ಅಜ್ಮಾನಿನ ಅಧ್ಯಕ್ಷರಾದ ಶೇಖ್ ಡಾ. ಮಜಿದ್ ಬಿನ್ ಸಯೀದ್ ಅಲ್ ನುಐಮಿ ಅವರು ಈ ಕ್ಷಣಕ್ಕೆ ಸಾಕ್ಷಿಯಾದರು.

Leave a Reply

Your email address will not be published. Required fields are marked *