March 22, 2026
IMG-20250322-WA0046

ರಾಮಲ್ ಕಟ್ಟೆ : ರಾಷ್ಟೀಯ ಹೆದ್ದಾರಿ ತುಂಬೆ ರಾಮಲ್ ಕಟ್ಟೆ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಟೊಯೊಟಾ ಇನ್ನೋವಾ ಕಾರೊಂದು ಡಿವೈಡರ್ ಮೇಲೇರಿ ಇನ್ನೊಂದು ದಿಕ್ಕಿನಲ್ಲಿ ಬರುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನೇನು ತಿಳಿದು ಬರಬೇಕಿದೆ.