March 22, 2026
IMG-20250422-WA0019

ಬಂಟ್ವಾಳ : ಮುಸ್ಲಿಂ ಸಮಾಜ ಬಂಟ್ವಾಳ ಇದರ ವತಿಯಿಂದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಏ.23 ರಂದು ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಮುಸ್ಲಿಂ ಸಮಾಜದ ಅಧ್ಯಕ್ಷ ಕೆ.ಎಚ್.ಅಬೂಬಕರ್ ತಿಳಿಸಿದ್ದಾರೆ.

ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಟ್ವಾಳ ತಾಲೂ ಕಿನ ವಿವಿಧ ರಾಜಕೀಯ, ಸಾಮಾಜಿಕ, ಧಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸುವರು ಎಂದರು.

ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ಎಸ್.ಮಹಮ್ಮದ್ ಮಾತನಾಡಿ, ಭಾರತದ ಅಭಿವೃದ್ಧಿಗೆ ಮುಸ್ಲಿಮರ ಕೊಡುಗೆ ಅಪಾರವಾಗಿದೆ. ದೇಶದ ಅವಿಭಾಜ್ಯ ಅಂಗವಾಗಿರುವ ಮುಸ್ಲಿಮರು ಸ್ವಾತಂತ್ರ್ಯಪೂರ್ವದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗೆ ಕೊಡುಗೆ ನೀಡಿದ್ದಾರೆ. ಬ್ರಿಟೀಷರ ವಿರುದ್ಧ ನಡೆದ ಸ್ವಾತಂತ್ರ್ಯ ಸಂಗ್ರಾಮದಲ್ಲಿಯೂ ಮುಸ್ಲಿಮರ ಹೋರಾಟಗಳು ಭಾರತದ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರ ಗಳಿಂದ ಬರೆಯಲ್ಪಟ್ಟಿದೆ. ಆದರೂ ಮುಸ್ಲಿಮರ ದೇಶಪ್ರೇಮವನ್ನು ಸದಾ ಸಂಶಯಾಸ್ಪದವಾಗಿ ಕಾಣುತ್ತಿ ರುವುದು ವಿಪರ್ಯಾಸ ಎಂದರು.