ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.
ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ದೂರು ನೀಡಿತ್ತು.