March 22, 2026
IMG-20240822-WA0037

ಬಂಟ್ವಾಳ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯು ಇಂದು ನಡೆದಿದ್ದು,
ಅಧ್ಯಕ್ಷರಾಗಿ ವಾಸು ಪೂಜಾರಿ, ಉಪಾಧ್ಯಕ್ಷ ಮೂನಿಶ್ ಅಲಿ ಆಯ್ಕೆ ಯಾಗಿದ್ದಾರೆ.
ಈ ಮೂಲಕ ಮಾಜಿ ಸಚಿವ ರಮಾನಾಥ ರೈ ತನ್ನ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದಾರೆ.
27 ಸದಸ್ಯ ಬಲದ ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ 12 ಸ್ಥಾನ ಹೊಂದಿತ್ತು.‌ ಕಾಂಗ್ರೆಸ್ ಸದಸ್ಯ ಗಂಗಾಧರ ಪೂಜಾರಿ ತಮ್ಮ‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಬಲ 11ಕ್ಕೆ ಕುಸಿದಿದೆ. ಬಿಜೆಪಿ 11 ಹಾಗೂ ಎಸ್‌ಡಿಪಿಐ 4 ಸದಸ್ಯರ ಬಲ ಹೊಂದಿದೆ.

ಇನ್ನು ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 15 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 13 ಮತಗಳನ್ನು ಪಡೆದರು. ಉಪಾಧ್ಯಕ್ಷ ಚುನಾವಣೆಯಲ್ಲಿ ಎಸ್ ಡಿ ಪಿಐ ಅಭ್ಯರ್ಥಿ 15 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 13 ಮತಗಳನ್ನು ಪಡೆದು ಸೋಲನುಭವಿಸಿದರು. ಕಾಂಗ್ರೆಸ್-ಎಸ್ ಡಿಪಿಐ ಮೈತ್ರಿ ಫಲಿಸಿದ್ದು, ಮೈತ್ರಿಯಿಂದ ಬಿಜೆಪಿ ಮುಖಭಂಗ ಅನುಭವಿಸಿತು