December 23, 2024
768-512-15836814-thumbnail-3x2-vny (1)

ಮಂಗಳೂರು :ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಹನ‌ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ.

ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಧಾರಾಳ ನೀರು ಹರಿಯುತ್ತಿದೆ.

ಬೆಂಗಳೂರಿನಿಂದ ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುವ ಕಾರಣ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ.

Leave a Reply

Your email address will not be published. Required fields are marked *