March 22, 2026
navbharat-times-100408673

ಬೆಂಗಳೂರು: ಇನ್ನೂ ಮೂರು ದಿನಗಳ ಕಾಲಾವಕಾಶ ಇದೆ. ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿನ ಸ್ಪರ್ಧೆ ಬಗ್ಗೆ ನಾನು ಚಿಂತನೆ ಮಾಡುತ್ತೇನೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಪಿ ಯೋಗೇಶ್ವರ್ ಸ್ಪರ್ಧೆ ಬಗ್ಗೆ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪಕ್ಷದ ನಾಯಕತ್ವ ತೀರ್ಮಾನ ಮಾಡುತ್ತದೆ. ಅದರ ಬಗ್ಗೆ ನಾನು ಏನೂ ಹೇಳಲ್ಲ. ನಾನು ಚನ್ನಪಟ್ಟಣಕ್ಕೆ ಹೋಗುತ್ತಿದ್ದೇನೆ. ಯುವಕರ ಸಭೆ ನಡೆಸಿ ಪಕ್ಷ ಸಂಘಟನೆಗೆ ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ಯಾರು ಅಭ್ಯರ್ಥಿ ಅನ್ನೋದು ಪಕ್ಷ ಘೋಷಣೆ ಮಾಡುತ್ತದೆ ಎಂದು ಹೇಳಿದರು.
ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಆಕಾಂಕ್ಷಿಗಳ ಕಸರತ್ತು ನಡೆಯುತ್ತಿದೆ. ಈ ಹಿನ್ನೆಲೆ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಮನೆಯಲ್ಲಿ ಡಿಕೆ ಸುರೇಶ್ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ.