ಮಂಗಳೂರು: ಕೇಂದ್ರ ಸರಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿದ್ದು, ಅದರಂತೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಿಂದ ಜಿಲ್ಲಾ ಬಿಜೆಪಿ ಕಚೇರಿಗೆ ಪಾದಯಾತ್ರೆ ಹೊರಟಿದ್ದು ಈ ನಡುವೆ ಮಲ್ಲಿಕಟ್ಟೆ ಜಂಕ್ಷನ್ ನಲ್ಲೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಘಟನೆ ಸೋಮವಾರ ನಡೆದಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಾವಣೆ ಹಾಗೂ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಸರಕಾರ ಇ.ಡಿ.ಯನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಷಡ್ಯಂತ್ರ ಆರೋಪಿಸಿದ್ದನ್ನು ಖಂಡಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸಲು ಮುಂದಾಗಿತ್ತು.
ಅದರಂತೆ ಪಾದಯಾತ್ರೆಯಲ್ಲಿ ಎಐಸಿಸಿ ವರಿಷ್ಠರ ಮಂಡಳಿ ಸದಸ್ಯ ವಿಜಯ್ ಇಂದರ್ ಸಿಂಗ್ಲಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಐವನ್ ಡಿ ಸೋಜಾ, ಮಿಥುನ್ ರೈ, ರಮಾನಾಥ ರೈ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದು, ಪೊಲೀಸರು ಮಲ್ಲಿಕಟ್ಟೆ ಜಂಕ್ಷನ್ ನಲ್ಲಿ ಪಾದಯಾತ್ರೆ ನಡೆಸುತ್ತಿದ್ದ ಕಾರ್ಯಕರ್ತರನ್ನು ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
