ಮೂಡಬಿದ್ರೆ :ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇರೆಗೆ ಕಾಮುಕ ತಂದೆಯನ್ನು ಮೂಡಬಿದಿರೆ ಪೋಲಿಸರು ಬಂಧಿಸಿದ್ದಾರೆ.

55 ವರ್ಷ ಪ್ರಾಯದ ಕೂಲಿ ಕಾರ್ಮಿಕ ಬಂಧಿತನಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.
ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.
ಮೊದಮೊದಲು ಆರೋಪಿಯು ಬೇರೆಯವರ ಹೆಸರು ಹೇಳಿ ಪೊಲೀಸ್ ತನಿಖೆಯ ದಾರಿ ತಪ್ಪಿಸಲೆತ್ನಿಸಿದ್ದ. ಆದರೆ, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದಾಗ ಅತ ತಪ್ಪೊಪ್ಪಿಕೊಂಡಿದ್ದಾನೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
