December 23, 2024
Screenshot_20241023_132810_Instagram

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್​ ಅಭ್ಯರ್ಥಿ ಯಾರು ಎನ್ನುವುದು ಬಹಿರಂಗವಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ನಡೆದಂತೆ, ಕುಮಾರಸ್ವಾಮಿ ಹೇಳಿದಂತೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​ ಸಮ್ಮುಖದಲ್ಲಿ ಯೋಗೇಶ್ವರ್​ ಅಧಿಕೃತವಾಗಿ ಕಾಂಗ್ರೆಸ್ ಮನೆ ಸೇರಿದರು. ಈ ಮೂಲಕ ಯೋಗೇಶ್ವರ್​, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್​ನಿಂದ ಕಣಕ್ಕಿಳಿಯುವುದು ಖಚಿತವಾಗಿದೆ.

ಕಾಂಗ್ರೆಸ್ ಸೇರ್ಪಡೆಗೆ ಇನ್ನೇನು ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ. ವಾಟ್ಸಾಪ್​ ಮೂಲಕ ರಾಜೀನಾಮೆ ಪತ್ರವನ್ನು ರವಾನಿಸಿದ್ದು, ಈ ದಿನ ನಾನು ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆ ಸ್ವೀಕರಿಸಬೇಕೆಂದು ಕೋರುತ್ತೇನೆ. ಇಲ್ಲಿಯವರೆಗೆ ನನಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಬಳಿಕ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.

Leave a Reply

Your email address will not be published. Required fields are marked *