ಬಂಟ್ವಾಳ: ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಮ್ಮೆಮಾರ್ ನಿವಾಸಿ ತಸ್ಲೀಮ್ ಮತ್ತು ಮಹಮ್ಮದ್ ಶಾಕೀರ್ ಮಾತನಾಡುತ್ತಿದ್ದ ವೇಳೆ ತಸ್ಲೀಮ್ ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಹಾಕಿದ್ದಾನೆ.
ಈ ವೇಳೆ ಅವರು ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ ಆರೋಪಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ.
ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಆರೋಪಿಗಳಾಗಿದ್ದಾರೆ.