ಮಂಗಳೂರು: ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ನಡೆಯುವ ಒಂದು ತಿಂಗಳ ಕರಾವಳಿ ಉತ್ಸವದ ಅಂಗವಾಗಿ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಿರುವ ಮೊಟ್ಟ ಮೊದಲ ‘ರೋಬೋಟಿಕ್ ಬಟರ್‌ಫ್ಲೈ ಶೋ’ ಅನ್ನು ಶಾಸಕ ವೇದವ್ಯಾಸ್ ಕಾಮತ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭಾನುವಾರ ಉದ್ಘಾಟಿಸಿದರು.ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಚಿಟ್ಟೆಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಚಿಟ್ಟೆಗಳ ಸಂರಕ್ಷಣೆ ಹಾಗೂ ಪರಿಸರ ಸಮತೋಲನ ಕುರಿತು ಜಾಗೃತಿ ಮೂಡಿಸಲು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.