March 22, 2026
IMG-20241024-WA0077

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ನಡೆದಿದೆ.

ಬಡಕಬೈಲು ನಿವಾಸಿ ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ, 4ನೇ ತರಗತಿಯ ವಿದ್ಯಾರ್ಥಿನಿ ಆಯಿಷಾ ವಹಿಬಾ (11 ) ಮೃತರು ಎಂದು ತಿಳಿದು ಬಂದಿದೆ.
ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ಆಟೋ ರಿಕ್ಷಾಗೆ ಕಲ್ಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ದಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಯಿಷಾ ವಹಿಬಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ.
ರಿಕ್ಷಾದಲ್ಲಿದ್ದ ಇತರ ಮೂವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.