December 23, 2024
FB_IMG_1732523981599

PERTH, AUSTRALIA - NOVEMBER 25: Jasprit Bumrah of India celebrates with Virat Kohli of India after taking the wicket of Travis Head of Australia for 89 runs during day four of the First Test match in the series between Australia and India at Perth Stadium on November 25, 2024 in Perth, Australia. (Photo by Robert Cianflone/Getty Images)

ಆಸ್ಟ್ರೇಲಿಯಾ :ಪರ್ತ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಇದು ಆಸ್ಟ್ರೇಲಿಯಾದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ 1977 ರಲ್ಲಿ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 222 ರನ್​ಗಳ ಗೆಲುವು ದಾಖಲಿಸಿದ್ದು ಇದುವರೆಗಿನ ಶ್ರೇಷ್ಠ ಜಯವಾಗಿತ್ತು. ಇದೀಗ ಬರೋಬ್ಬರಿ 47 ವರ್ಷಗಳ ಬಳಿಕ ಹೊಸ ಇತಿಹಾಸ ರಚಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.

ಒಪ್ಟಸ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 150 ರನ್​ಗಳಿಸಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡವು ಭಾರತೀಯ ವೇಗಿಗಳ ಮಾರಕ ದಾಳಿಗೆ ತತ್ತರಿಸಿ ಕೇವಲ 104 ರನ್​ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಬುಮ್ರಾ 30 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು.

Leave a Reply

Your email address will not be published. Required fields are marked *