ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಯ ಪರಿಣಾಮ
ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹ್ಮಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಇನ್ನೂರ್ವ ಗಾಯಾಳು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.


ಆಸ್ಪತ್ರೆಗೆ ಮುಸ್ಲಿಂ ಮುಖಂಡರ ದೌಡು ನಾಯಕರನ್ನು ತರಾಟೆಗೆ ತೆಗೆದ ಯುವಕರು
ಘಟನೆ ನಡೆದ ತಕ್ಷಣ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿಯ ಆರೋಗ್ಯ ವಿಚಾರಿಸಲು ಬಂದ ಮುಸ್ಲಿಂ ಮುಖಂಡರನ್ನು ಯುವಕರು ಅಡ್ಡ ಗಟ್ಟಿ ತರಾಟೆಗೆ ತೆಗೆದ ಪ್ರಸಂಗ ನಡೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದು ಮುಸ್ಲಿಂ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿದೆ ಮೊನ್ನೆ ನಡೆದ ಹಿಂದೂ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದವರ ವಿರುದ್ಧ ಕ್ರಮ ಜಿಲ್ಲಾ ಆಡಳಿತ ಕೈಗೊಂಡಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ ಎಂದು ನಾಯಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದರು ಸಮುದಾಯಕ್ಕೆ ನಿಮ್ಮ ನಾಯಕತ್ವದ ಅವಶ್ಯಕತೆ ಇಲ್ಲ ಎಂದು ಈ ಸಂದರ್ಭದಲ್ಲಿ ಗುಡುಗಿದರು.
