ಶ್ರೀಲಂಕಾ :ಪಲ್ಲೆಕೆಲೆ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ಇದೀಗ ಭಾರತ ಹಾಗೂ ಶ್ರೀಲಂಕಾ ತಂಡಗಳು ಟಿ20 ಸರಣಿಯ ಮೊದಲನೇ ಪಂದ್ಯದಲ್ಲಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಬೌಲಿಂಗ್ ಆರಿಸಿಕೊಂಡಿದೆ. ಹಾಗಾಗಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ. ಇತ್ತೀಚೆಗೆ 2024ರ ಟಿ20 ವಿಶ್ವಕಪ್ ಗೆಲುವಿನ ವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಇದೀಗ ಶ್ರೀಲಂಕಾ ನೆಲದಲ್ಲಿ ಟಿ20 ಸರಣಿ ಗೆಲುವಿನ ವಿಶ್ವಾಸವನ್ನು ಹೊಂದಿದೆ. ಭಾರತ ತಂಡ ತನ್ನ ನೂತನ ಕೋಚ್ ಗೌತಮ್ ಗಂಭೀರ್ ಹಾಗೂ ನೂತನ ನಾಯಕ ಸೂರ್ಯಕುಮಾರ್ ಯಾದವ್ ಅವರ ಅಡಿಯಲ್ಲಿ ತನ್ನ ಹೊಸ ಪಯಣವನ್ನು ಆರಂಭಿಸಿದೆ.
ಬೃಹತ್ ಮೊತ್ತ ಕಲೆ ಹಾಕಿದ ಭಾರತ!
ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಮತ್ತು ತಂಡದ ನೂತನ ನಾಯಕ ಸೂರ್ಯಕುಮಾರ್ ಆರ್ಭಟದ ಆಟದೊಂದಿಗೆ ಒಟ್ಟು 20 ಓವರ್ಗಳಲ್ಲಿ 213/7 ರನ್ ಕಲೆಹಾಕಿದೆ.