March 22, 2026
IMG-20240827-WA0025

ಕಡಬ: ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿದು ಬಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.
ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಹೊರಗಡೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.