December 23, 2024
360_F_158561775_mjwuvKbL7z6PgiNBwc5t0V5F1V88sKFV

ಅಯೋಧ್ಯೆ : ಬೆಂಗಳೂರು ಟು ಅಯೋಧ್ಯೆ ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌ ಮಾಡಲಾಗಿದೆ. ವಿಮಾನದಲ್ಲಿ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್‌ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಟು ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.

ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಪ್ರಯಾಣಿಕರ ಲಗೇಜ್ ಮತ್ತು ವಿಮಾನವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಅದೊಂದು ಹುಸಿಬಾಂಬ್​ ಬೆದರಿಕೆ ಆಗಿದೆ. ವಿಮಾನದಲ್ಲಿ 173 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸದ್ಯ ಎಲ್ಲಾ ಪ್ರಯಾಣಿಕರು ಈಗ ಸುರಕ್ಷಿತವಾಗಿದ್ದಾರೆ. ಬುಧವಾರ ಕೂಡ ನಮಗೆ ಇದೇ ರೀತಿಯ ಹುಸಿಬಾಂಬ್​ ಕರೆ ಬಂದಿತ್ತು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *