ಬಂಟ್ವಾಳ: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭಾಗವಾಗಿ ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿ ನಡೆಯುತ್ತಿವ ಹಿನ್ನೆಲೆಯಲ್ಲಿ ವಾಹನ ಸಂಚಾರದ ಪಥ ಬದಲಿಸಲಾಗಿತ್ತು. ಈ ಹಿನ್ನೆಲೆ ನ. 26ರ ಮಧ್ಯಾಹ್ನದ ವೇಳೆಗೆ ಸುಮಾರು 1 ಗಂಟೆಯ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿಗಾಗಿ ಪದೇ ಪದೇ ಸಂಚಾರ ಪಥ ಬದಲಿಸಲಾಗುತ್ತಿದೆ. ಈ ಹಿನ್ನೆಲೆ ವಾಹನ ಚಾಲಕರಿಗೆ ಗೊಂದಲ ಉಂಟಾಗುತ್ತಿದೆ. ಪರಿಣಾಮ ಇಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗುವಂತಾಗಿದೆ.