February 4, 2026
Ajit-Pawar-Dies-In-Plane-Crash

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

ಅಜಿತ್‌ ಪರವಾರ್‌ ಸೇರಿದಂತೆ 6 ಸಿಬ್ಬಂದಿಗಳನ್ನು ವಿಮಾನ ಹೊತ್ತೊಯ್ಯುತ್ತಿತ್ತುಎಂದು ತಿಳಿಸಲಾಗಿದೆ. ಮುಂಬೈನಿಂದ ಬಾರಾಮತಿಗೆ ವಿಮಾನ ತೆರಳುತ್ತಿದ್ದ. ಏರ್‌ಕ್ರಾಫ್ಟ್‌ ಲ್ಯಾಂಡಿಂಗ್‌ ಆಗುವ ವೇಳೆ ಬಾರಾಮತಿಯ ಹೊಲದಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ಡಿಜಿಸಿಎ ತಿಳಿಸಿದೆ.

ಇಂದು ಬೆಳಗ್ಗೆ 8.30ಕ್ಕೆ ದುರಂತ ಸಂಭವಿಸಿದೆ . ಬಾರಾಮತಿಯಲ್ಲಿ ಅಪಘಾತಕ್ಕೀಡಾದ ವಿಮಾನದ ಬಗ್ಗೆ ಮಾಹಿತಿ ನೀಡಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನದಲ್ಲಿ ಇನ್ನೂ 2 ಸಿಬ್ಬಂದಿ (1 ಪಿಎಸ್ಒ ಮತ್ತು 1 ಅಟೆಂಡೆಂಟ್) ಮತ್ತು 2 ಸಿಬ್ಬಂದಿ (ಪಿಐಸಿ+ಎಫ್‌ಒ) ಸದಸ್ಯರೊಂದಿಗೆ ಇದ್ದರು. ಆರಂಭಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಯಾರೂ ಅಪಘಾತದಲ್ಲಿ ಬದುಕುಳಿದಿಲ್ಲ ಎಂದು ಹೇಳಿದೆ.

ಮುಂಬೈನಿಂದ ಬೆಳಗ್ಗೆ 8.10ಕ್ಕೆ ವಿಮಾನ ಬಾರಾಮತಿ ಕಡೆ ಪ್ರಯಾಣ ಮಾಡಿತ್ತು. ಇನ್ನೇನು ಬಾರಾಮತಿಯಲ್ಲಿ ಲ್ಯಾಂಡಿಂಗ್‌ ಆಗಬೇಕು ಎನ್ನುವಾಗ ಈ ಅಪಘಾತ ಸಂಭವಿಸಿದೆ. 45XR ಮಾದರಿಯ ಸಣ್ಣ ಏರ್‌ಕ್ರಾಫ್ಟ್‌ ಇದಾಗಿದ್ದು, ಬೆಳಗ್ಗೆ 8.10ಕ್ಕೆ ಮುಂಬೈನಿಂದ ಹೊರಟಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಪವಾರ್ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು.