

ನೇಪಿಟಾವ್: ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 60 ಮಂದಿ ಸಾವನ್ನಪ್ಪಿದ್ದು, 250 ಮಂದಿ ಗಾಯಗೊಂಡಿದ್ದಾರೆ.
ಮ್ಯಾನ್ಮಾರ್‌ನಲ್ಲಿ ಸತತ ಎರಡು ಭೂಕಂಪಗಳು ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆ ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಶುಕ್ರವಾರ ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ಮಧ್ಯ ಮ್ಯಾನ್ಮಾರ್‌ನಲ್ಲಿದ್ದು, ಮೋನಿವಾ ನಗರದಿಂದ ಸುಮಾರು 50 ಕಿಲೋಮೀಟರ್ ಪೂರ್ವಕ್ಕೆ ಇದೆ ಎಂದು ವರದಿಯಾಗಿದೆ.
ಜನರು ಕಾಣೆಯಾಗಿದ್ದಾರೆ. 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮ್ಯಾನ್ಮಾರ್‌ನ ಮಂಡಲೇಯಲ್ಲಿರುವ ಐಕಾನಿಕ್ ಅವಾ ಸೇತುವೆ ಭೂಕಂಪದಲ್ಲಿ ಕುಸಿದು ಬಿದ್ದು, ಒಂದು ಮಸೀದಿ ಭಾಗಶಃ ಕುಸಿದು ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ. ಹಲವಾರು ಕಟ್ಟಡಗಳು ಕುಸಿದು ರಸ್ತೆಗಳು ಬಿರುಕು ಬಿಟ್ಟಿದೆ.