ಬೆಂಗಳೂರು: ರಾಜ್ಯಾದ್ಯಂತ ಈ ಬಾರಿ ಮುಂಗಾರು ಮಳೆ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಗೆ ಗುಡ್ಡಗಳು, ಮನೆ ಗೋಡೆ ಕುಸಿದು ಬಿದ್ದು ಹಲವು ಅವಘಡಗಳು ಸಂಭವಿಸಿವೆ.
ಬೆಂಗಳೂರು-ಮಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಮೊನ್ನೆ ಶುಕ್ರವಾರ ಸಂಜೆ ಭೂಕುಸಿತ ಉಂಟಾಗಿ ರೈಲು ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದ ಕೆಲ ರೈಲುಗಳ ಸಂಚಾರವನ್ನು ನಾಳೆ ಜುಲೈ 29ರವರೆಗೆ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.