February 4, 2026
Rain_Casual_Images

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮತ್ತಷ್ಟು ಚುರುಕಾಗಿದ್ದು, ಈ ವಾರ ಪೂರ್ತಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ರಾಜ್ಯದ 6 ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚು ಸುರಿಯಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ವಾರ್ನಿಂಗ್​ ನೀಡಲಾಗಿದೆ.