February 4, 2026
IMG-20250828-WA0131

ತಲಪಾಡಿ: ಬಸ್, ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಲಪಾಡಿ ಟೋಲ್ ಗೇಟ್ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.

ಇಂದು ಮಧ್ಯಾಹ್ನಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಮೇಲಿನ ತಲಪಾಡಿ ಅಪಘಾತ ನಡೆದಿದ್ದು ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ 5 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎಂದು ವರದಿಯಾಗಿದೆ.

ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.