ತಲಪಾಡಿ ಗಡಿ ಬಳಿಯಲ್ಲಿ ಇಂದು ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿ ಹೊಡೆದು ಓರ್ವ ಬಾಲಕಿ ಸಹಿತ ನಾಲ್ವರು ಮಹಿಳೆಯರು ಹಾಗೂ ರಿಕ್ಷಾ ಚಾಲಕ ಹೈದರ್ ಅಲಿ ಮೃತಪಟ್ಟು ಕೆಲವರು ಗಾಯಗೊಂಡ ಘಟನೆ ಸಂಭವಿಸಿದ್ದು,ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಸಾರಿಗೆ ಸಚಿವರಾದ ರಾಮ ಲಿಂಗಾ ರೆಡ್ಡಿ ರವರೊಂದಿಗೆ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಲು ಹಾಗೂ ಮೃತರಿಗೆ ಕೆಎಸ್ಸಾರ್ಟಿಸಿ ವತಿಯಿಂದ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ.
