December 22, 2024
police-barricade-tapes-on-crime-scene

Police line do not cross barricade tapes on a crime scene with evidence numbers.

ತಿರುವನಂತಪುರಂ: ಯೂಟ್ಯೂಬ್ ಚಾನಲ್‌ನಲ್ಲಿ ಸಕ್ರಿಯವಾಗಿದ್ದ ದಂಪತಿ ಭಾನುವಾರ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದ ಪರಸ್ಸಾಲ ಪಟ್ಟಣದಲ್ಲಿ ನಡೆದಿದೆ.

ಸೆಲ್ವರಾಜ್ (45), ಪ್ರಿಯಾ (40) ಶವವಾಗಿ ಪತ್ತೆಯಾದ ದಂಪತಿ. ಎರಡು ದಿನಗಳಿಂದ ಮನೆಯಿಂದ ಆಚೆ ಬಾರದ ಕಾರಣ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸೆಲ್ವರಾಜ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಿಯಾ ಮೃತದೇಹ ಹಾಸಿಗೆ ಮೇಲೆ ಪತ್ತೆಯಾಗಿದೆ ಎಂದು ಪರಸ್ಸಾಲ ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಎರಡು ದಿನಗಳ ಹಿಂದೆ ಘಟನೆ ಸಂಭವಿಸಿರಬಹುದು ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ಸೆಲ್ವರಾಜ್ ಹಾಗೂ ಪ್ರಿಯಾ ದಂಪತಿ ‘ಸೆಲ್ಲು ಫ್ಯಾಮಿಲಿ’ ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಅವರ ಚಾನಲ್ ಸುಮಾರು 18,000 ಫಾಲೋವರ್ಸ್ ಅನ್ನು ಹೊಂದಿದ್ದು, 1,400ಕ್ಕೂ ಹೆಚ್ಚು ವೀಡಿಯೋಗಳನ್ನು ತಮ್ಮ ಚಾನಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *