ಮಂಗಳೂರು: ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಫಳ್ನೀರ್ ಬಳಿಯ ಚಿನ್ನಾಭರಣಗಳ ಅಂಗಡಿಯ ಮುಂದೆ ನಿಲ್ಲಿಸಲಾಗಿದ್ದ ಮಹೇಂದ್ರ ಬೊಲೆರೊ ವಾಹನ ಬೆಂಕಿಗೆ ಸುಟ್ಟು ಕರಕಲಾಗಿದೆ. ತಕ್ಷಣ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ
ತರುವಲ್ಲಿ ಯಶಸ್ವಿಯಾದರು.
ಕೆಲವು ದಿನಗಳ ಹಿಂದೆಯಷ್ಟೇ ಸರಿ ಸುಮಾರು ಮೂರು ಕಾರು ಜಿಲ್ಲೆಯಲ್ಲಿ ಬೆಂಕಿಗೆ ಆಹುತಿಯಾಗಿತ್ತು.