ಮಂಗಳೂರು: ರಾಜ್ಯದ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಇದರಲ್ಲಿ ರಾಜ್ಯದ ಜನತೆಯ ಮುಖ್ಯವಾಗಿ ಉತ್ತರ ಕರ್ನಾಟಕದ ಭಾಗದ ಜನತೆಯ ಹಿತದೃಷ್ಟಿಯಿಂದ ಚರ್ಚೆ ಕಲಾಪ ನಡೆಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮನವಿ ಮಾಡಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷ ಹಾಗೂ ವಿಪಕ್ಷಗಳು ತಮ್ಮ ವಿವಿಧ ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ ಎಂದು ಯು.ಟಿ.ಖಾದರ್ ಮನವಿ ಮಾಡಿದರು.