ಬಂಟ್ವಾಳ : ಪತ್ನಿಗೆ ತ್ರಿವಳಿ ತಲಾಖ್ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮನೆಯಿಂದ ಹೊರಗೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ನಿನ್ನೆ ರಾತ್ರಿ ನಡೆದಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಆರೋಪಿಯನ್ನು ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ.
ಆರೋಪಿಯು ಈಗಾಗಲೇ ನಾಲ್ಕು ಮದುವೆ ಆಗಿದ್ದು, ಕೆಲವು ವರ್ಷ ಸಂಸಾರ ಮಾಡಿ ಬಳಿಕ ವಿಚ್ಚೇದನ ನೀಡಿ ಪರಾರಿಯಾಗುತ್ತಾನೆ ಎಂದು ಊರಿನವರು ದೂರಿದ್ದಾರೆ.
ಪತ್ನಿ ನೀಡಿದ ದೂರಿನಲ್ಲಿ ಏನಿದೆ..?
ನಿನ್ನೆ ಸಂಜೆ ಸುಮಾರು 5 ಗಂಟೆಗೆ ಆರೋಪಿಯಾದ ಗಂಡ ಮೊಹಮ್ಮದ್ ರಫೀಕ್ ನ ಮನೆಗೆ ನಾನು ಹೋಗಿದ್ದೇನೆ. ಹೋದಂತ ಸಂದರ್ಭದಲ್ಲಿ ಆರೋಪಿಯಾದ ರಫೀಕ್ ಅವಾಚ್ಯ ಶಬ್ದಗಳಿಂದ ಬೈದು, ನಂತರ ಮಗುವನ್ನು ಕೊಂದು ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಅಲ್ಲದೆ ತ್ರಿವಳಿ ತಲಾಖ್ ಎಂದು ಹೇಳಿ ಮನೆಯಿಂದ ಹೊರಗೆ ದಬ್ಬಿರುತ್ತಾನೆ. ಅಲ್ಲದೇ ನನ್ನ ಬಳಿ ಇದ್ದ ಚಿನ್ನವನ್ನು ಸಹ ತೆಗೆದುಕೊಂಡಿರುತ್ತೇನೆ ಎಂದು ದೂರು ನೀಡಿದ್ದಾರೆ.
ಸೆಕ್ಷನ್ BNS/-85,86,352,351(1),115(2) ರಲ್ಲಿ ಪ್ರಕರಣವನ್ನು ದಾಖಲೆ ಮಾಡಿದ್ದಾರೆ.