

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಯಿಝ (9) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾಳೆ.
ಈ ಹಿನ್ನೆಲೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ರಾತ್ರಿ ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆಯ ಆಸ್ಪತ್ರೆಯೊದರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಡಿಸೆಂಬರ್ 13ರಂದು ಮೃತಪಟ್ಟಿದ್ದರೆ, ಅವರ ಇಬ್ಬರ ಮಕ್ಕಳ ಪೈಕಿ ಮಹದಿಯಾ ಗುರುವಾರ ಮೃತಪಟ್ಟಿದ್ದಾರೆ. ಇಂದು ಮಾಯಿಝ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಡಿಸೆಂಬರ್ 8ರಂದು ಮಂಜನಾಡಿ ಗ್ರಾಮದ ಖಂಡಿಕ ನಿವಾಸಿಯಾಗಿದ್ದ ಮುತ್ತಲಿಬ್ ಅವರ ಮನೆಯಲ್ಲಿ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ಈ ಸಂದರ್ಭ ಮುತ್ತಲಿಬ್ ಅವರ ಪತ್ನಿ ಖುಬ್ರಾ ಮತ್ತು ಮಕ್ಕಳಾದ ಝುಲೈಕ ಮೆಅದಿಯಾ, ಮಾಝಿಯಾ ಮತ್ತು ಮಾಯಿದಾ ಕೊಠಡಿಯಲ್ಲಿ ಮಲಗಿದ್ದರು. ಸ್ಫೋಟದ ಪರಿಣಾಮ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿತ್ತು. ಘಟನೆಯಲ್ಲಿ ನಾಲ್ವರೂ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.