March 22, 2026

ತಮಿಳುನಾಡು :ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಅಂತರಾಷ್ಟ್ರೀಯ ಜಂಬೂರಿ ವಜ್ರ ಮಹೋತ್ಸವಕ್ಕೆ ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ ತಮಿಳುನಾಡು ಉಪ ಮುಖ್ಯಮಂತ್ರಿ ಉದಯಾನಿಧಿ ಸ್ಟಾಲಿನ್,ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕರ್ನಾಟಕ ಸಭಾಧ್ಯಕ್ಷ ಯು ಟಿ ಖಾದರ್ ಸಿಗ್ನೇಚರ್ ಬೋರ್ಡ್ ಗೆ ಸಹಿ ಹಾಕುವ ಮೂಲಕ ಚಾಲನೆ ನೀಡಿದರು.

ಈ ಪ್ರತಿಷ್ಠಿತ ಕಾರ್ಯಕ್ರಮವು ಏಳು ದಿನಗಳ ಕಾಲ ನಡೆಯಲಿದ್ದು, ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಪ್ರಪಂಚದಾದ್ಯಂತದ ಹಲವಾರು ದೇಶಗಳಿಂದ 20,000 ಕ್ಕೂ ಹೆಚ್ಚು ಸ್ಕೌಟ್ಸ್ ಮತ್ತು ಗೈಡ್‌ಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವಾಗಲಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಸಚಿವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಜಿ ಆರ್ ಸಿಂಧ್ಯಾ,ತಮಿಳುನಾಡು ಪೌರಾಡಳಿತ ಸಚಿವ ಕೆ ಎನ್ ನೆಹರು,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಸುಬ್ರಹ್ಮಣ್ಯನ್,ಶಿಕ್ಷಣ ಸಚಿವ ಅಣ್ಬಿಲ್ ಮಹೇಶ್ ಮುಂತಾದವರು ಉಪಸ್ಥಿತರಿದ್ದರು.