ಮಂಗಳೂರು: ನಗರದ ಹೊರವಲಯದ ಕುಡುಪು ಸಮೀಪ ರವಿವಾರ ಸಂಜೆ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧನ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 30 ಜನರ ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದು ಖಚಿತವಾಗಿದೆ ಎಂದು ಹೇಳಿದರು. ಅದರಲ್ಲಿ 25ಕ್ಕೂ ಹೆಚ್ಚು ಆರೋಪಿಗಳ ಗುರುತು ಪತ್ತೆ ಮಾಡಿದ್ದು, 15 ಮಂದಿಯನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಆರೋಪಿಗಳು ಹಲ್ಲೆಯ ಬಗ್ಗೆ ಒಪ್ಪಿಕೊಂಡಿದ್ದು, ಆ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.
