ಮಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ರವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಿನಲ್ಲಿಸನ್ಮಾನಿಸಿದರು.
ಖಾದರ್ ಅವರಿಗೆ ಶಾಲು ,ಪುಸ್ತಕ ಮತ್ತು ಸ್ಮರಣಿಕೆ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.