April 19, 2025
IMG-20241228-WA0050

ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ ಗ್ಯಾಸ್ ಸ್ಫೋಟ ದುರಂತ ಸಂಭವಿಸಿ ತೀವ್ರ ಗಾಯಗಳೊಂದಿಗೆ ಆಸ್ಪತ್ರೆ ಸೇರಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳು ಮೃತರಾಗಿದ್ದು ಸರಕಾರದಿಂದ ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ವಿತರಿಸಲಾಗುವುದು ಎಂದು ಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಮುಖ್ಯಮಂತ್ರಿಗಳೊಡನೆ ಚರ್ಚೆ ನಡೆಸಿದ ಬಳಿಕ ಸಭಾಧ್ಯಕ್ಷ ಯು ಟಿ ಖಾದರ್ ಪರಿಹಾರ ಘೋಷಿಸಿದ್ದು,ಗ್ಯಾಸ್ ಏಜೆನ್ಸಿ ಯ ಜೊತೆಯೂ ಮಾತುಕತೆ ನಡೆಸಿರುವ ಯು ಟಿ ಖಾದರ್ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು ಶೀಘ್ರ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.