March 22, 2026
pk-kunhalikutty-ls (1)

ಬೆಂಗಳೂರು: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಾಯಕ ಪಿಕೆ ಕುನ್ಹಾಲಿಕುಟ್ಟಿ ಇದೀಗ ಹೇಳಿಕೆಯೊಂದನ್ನು ನೀಡಿದ್ದಾರೆ.

ಕೋಗಿಲು ಕಟ್ಟಡ ಧ್ವಂಸಗಳನ್ನು ಉತ್ತರ ಪ್ರದೇಶದಲ್ಲಿ ನಡೆದ ಇದೇ ರೀತಿಯ ಕ್ರಮಗಳಿಗೆ ಹೋಲಿಸಬಾರದು ಎಂದು ಹೇಳಿದ್ದಾರೆ. ಇದೀಗ ಈ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಐಯುಎಂಎಲ್ ರಾಷ್ಟ್ರೀಯ ಕಾರ್ಯದರ್ಶಿ ಆಗಿರುವ ಪಿಕೆ ಕುನ್ಹಾಲಿಕುಟ್ಟಿ, ಈಗಾಗಲೇ ಕರ್ನಾಟಕದ ಹಿರಿಯ ನಾಯಕರೊಂದಿಗೆ, ಸಚಿವರೊಂದಿಗೆ, ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ. ಈ ಮೂಲಕ ಹಲವು ನಿರ್ಧಾರಗಳನ್ನು ಕರ್ನಾಟಕ ಸರ್ಕಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಡೆದ ಧ್ವಂಸ ಕಾರ್ಯಾಚರಣೆ ಕೇವಲ ಮುಸ್ಲಿಂರ ಮೇಲೆ ಮಾತ್ರ ಆಗಿಲ್ಲ, ಇತರ ಧರ್ಮದವರು ಕೂಡ ಇದ್ದಾರೆ. ಮನೆ ಕಳೆದುಕೊಂಡ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಭರವಸೆ ನೀಡಲಾಗಿದೆ. ರಾಜ್ಯ ಸರ್ಕಾರವು ಸಂತ್ರಸ್ತ ನಿವಾಸಿಗಳಿಗೆ ಪುನರ್ವಸತಿ ನೀಡಲು ಬದ್ಧವಾಗಿದೆ. ಈ ವಿಷಯವನ್ನು ರಾಜಕೀಯಗೊಳಿಸುವ ಪ್ರಯತ್ನ ಮಾಡುವುದು ಬೇಡ ಎಂದು ಹೇಳಿದರು.