ಮಂಗಳೂರು : ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.
ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿ ಬಾತೀಷ್ ಅಳಕೆಮಜಲು ಕಣಕ್ಕೆ ಇಳಿಯಲಿದ್ದಾರೆ.
NSUI ನಲ್ಲಿ ಕಳೆದ 9 ವರ್ಷಗಳಿಂದ ತಾಲೂಕು ,ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸಮಿತಿಯಲ್ಲಿ ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಯನ್ನು ವಹಿಸಿರುವ ಇವರು ಸದ್ಯ ಹಲವಾರು ಸಂಘ ಸಂಸ್ಥೆಗಳೊಡನೆ ಗುರುತಿಸಿಕೊಂಡಿದ್ದಾರೆ.
ಕಳೆದ ವರ್ಷ ದೆಹಲಿ ಯೂನಿವರ್ಸಿಟಿ ಯ ವಿದ್ಯಾರ್ಥಿ ಸಂಘ ದ ಚುನಾವಣೆಯಲ್ಲಿ ಉಸ್ತುವಾರಿಯಾಗಿ ಕರ್ನಾಟಕದಿಂದ ಆಯ್ಕೆ ಆಗಿ ತನ್ನ ತಂಡದೊಂದಿಗೆ ಅಲ್ಲಿ NSUI ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ..
2019 ರ ವಿದ್ಯಾರ್ಥಿ ರಂಗದಲ್ಲಿಯೇ ಯುವ ಇಂಟಕ್ ಇದರ ಜಿಲ್ಲಾ ಉಪದ್ಯಕ್ಷರಾಗಿ ಕಾರ್ಯವಹಿಸಿದ್ದಾರೆ..
ಹಲವು ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಚಾರಗಳಲ್ಲಿ ಹಲವು ರೀತಿಯ ಸಹಾಯ ಮಾಡಿ ಸಹಕರಿಸಿರುತ್ತಾರೆ.
ಜುಲೈ 24ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು,ಆಗಸ್ಟ್ 2ರವರೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ, ಆಗಸ್ಟ್ 3ರಿಂದ 8ರವರೆಗೆ ನಾಮಪತ್ರ ಪರಿಶೀಲನೆ ಮಾಡಲಾಗುವುದು. ಆಗಸ್ಟ್ 9ರಂದು ನಾಮಪತ್ರ ಅಂತಿಮ ಮಾಡಲಾಗುವುದು. ಅತಿ ಹೆಚ್ಚು ಮತ ಪಡೆಯುವವರು ಅಧ್ಯಕ್ಷರಾಗಿ ಆಯ್ಕೆಯಾದರೆ, ಮತಗಳ ಆಧಾರದ ಮೇಲೆ ನಂತರದ ಸ್ಥಾನ ಪಡೆಯುವರಿಗೆ ಇತರೆ ಸ್ಥಾನ ನೀಡಲಾಗುವುದು. ಈ ವೇಳೆ ಪಕ್ಷವು ಅಗ್ರ ಮೂರು ಸ್ಥಾನ ಪಡೆದವರ ಸಂದರ್ಶನವನ್ನು ಮಾಡಲಿದೆ ಎಂದು ಮಾಹಿತಿ ನೀಡಿದರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು.