ವಯನಾಡ್(ಕೇರಳ): ನೆರೆ ರಾಜ್ಯ ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಇಂದು ಮುಂಜಾನೆ ಎರಡರಿಂದ ಮೂರು ಭೀಕರ ಭೂಕುಸಿತ ಉಂಟಾಗಿದೆ. ಇದುವರೆಗೆ ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿ 107 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಇನ್ನೂ ಹಲವು ಮಂದಿ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಸಾವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿದ್ದು, ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿವೆ.ಭೂಕುಸಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಚುರುಕು ಪಡೆದಿದೆ. ಇಲ್ಲಿಯವರೆಗೆ ಅನೇಕರನ್ನು ರಕ್ಷಿಸಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

53 ಜನ ಗಾಯಾಳುಗಳನ್ನು ಒಂದೇ ಆಸ್ಪತ್ರೆಗ ದಾಖಲಿಸಲಾಗಿದೆ. ಇದೇ ಆಸ್ಪತ್ರೆಯಲ್ಲಿ ಆರು ಮೃತದೇಹಗಳಿವೆ. ಮತ್ತೊಂದು ಆಸ್ಪತ್ರೆಯಲ್ಲಿ 13 ಮಂದಿ ಗಾಯಾಳುಗಳನ್ನು ದಾಖಲಿಸಲಾಗಿದೆ. ಇಲ್ಲಿಯೂ ಆರು ಮೃತದೇಹಗಳಿವೆ” ಎಂದು ಸಚಿವ ಸಶೀಂದ್ರನ್ ತಿಳಿಸಿದ್ದಾರೆ.”ರಕ್ಷಣಾ ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್‌ಗಳ ಬರುವಿಕೆಗಾಗಿ ಕಾಯುತ್ತಿದ್ದೇವೆ. ಶೀಘ್ರದಲ್ಲೇ ಹೊಸ ರೋಪ್‌ವೇ ನಿರ್ಮಿಸಲಾಗುವುದು. ಈ ಪ್ರದೇಶದಲ್ಲಿ ಸೇತುವೆ ಮುಳುಗಿದೆ. ಸಂಕಷ್ಟದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಸೇನೆ ತಾತ್ಕಾಲಿಕ ಸೇತುವೆ ನಿರ್ಮಿಸಲಿದೆ” ಎಂದು ಮಾಹಿತಿ ನೀಡಿದ್ದಾರೆ.
