April 30, 2025
allwyn_150723_putthila

ಪುತ್ತೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಪುತ್ತಿಲ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿದೆ.

ಮಹಿಳೆಯೊಂದಿಗೆ ಮಾತನಾಡುತ್ತಿರುವ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲ ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ.
ಅರುಣ್ ಕುಮಾರ್ ಪುತ್ತಿಲ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿದ್ದು, ಸಮಾಜದಲ್ಲಿ ಓರ್ವ ಪ್ರತಿಷ್ಠಿತ ವ್ಯಕ್ತಿಯಾಗಿದ್ದು, ನ್ಯಾಯಾಲಯವು ಯಾವುದೇ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಪುತ್ತಿಲರ ಕುರಿತಾಗಿ ಮಾನಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ಪ್ರತಿಬಂಧಕಾಜ್ಞೆ ನೀಡಿರುತ್ತದೆ.