ಜೆರುಸಲೇಂ(ಜು31): ಬೆಂಜಮಿನ್ ನೆತನ್ಯಾಹು ಅವರ ಇಸ್ರೇಲಿ ಸೇನೆಯು ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾನನ್ನು ಹತ್ಯೆಗೈದಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿ ಇಸ್ಮಾಯಿಲ್ ಹನಿಯಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿ ಇಸ್ರೇಲ್ ದಾಳಿ ನಡೆಸುವ ಮೂಲಕ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಕೊಂದಿದೆ. ಆದರೆ, ಕೊಲೆ ಹೇಗೆ ನಡೆದಿದೆ ಎಂಬ ವಿವರಗಳು ಬಹಿರಂಗವಾಗಿಲ್ಲ.
ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಬುಧವಾರ ಬೆಳಿಗ್ಗೆ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಮತ್ತು ಅವರ ಅಂಗರಕ್ಷಕರಲ್ಲಿ ಒಬ್ಬರು ಟೆಹ್ರಾನ್‌ನಲ್ಲಿರುವ ಅವರ ನಿವಾಸದ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿತು. ದಾಳಿಯ ಕುರಿತು ತನಿಖೆ ನಡೆಸಲಾಗುತ್ತಿದ್ದು, ಫಲಿತಾಂಶವನ್ನು ನಂತರ ಪ್ರಕಟಿಸಲಾಗುವುದು ಎಂದು ಹೇಳಿಕೆ ತಿಳಿಸಿದೆ. ಇರಾನ್‌ನ ಹೊಸದಾಗಿ ಚುನಾಯಿತ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಹಮಾಸ್ ಮುಖ್ಯಸ್ಥರು ಟೆಹ್ರಾನ್‌ನಲ್ಲಿದ್ದರು ಎಂಬುವುದು ಉಲ್ಲೇಖನೀಯ.