ಮಂಗಳೂರು: ಆರ್‌ಎಸ್ಎಸ್ ಮುಖಂಡರೊಬ್ಬರ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ನನ್ನು ವಶಕ್ಕೆ ಪಡೆಯಲಾಗಿದೆ.

ಶರಣ್ ಪಂಪ್‌ವೆಲ್ ಅವರನ್ನು ಶುಕ್ರವಾರ (ಅ.31) ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಆಕ್ಷೇಪಾರ್ಹ ಕಮೆಂಟ್ ಅನ್ನು ಶೇರ್ ಮಾಡಿದ ಕಾರಣಕ್ಕೆ ವಿಎಚ್‌ಪಿ ಮುಖಂಡ ಶರಣ್ ಶರಣ್ ಪಂಪ್‌ವೆಲ್‌ಅನ್ನು ವಿಚಾರಣೆಗೆ ಪೊಲೀಸ್ ಠಾಣೆ ಗೆ ಕರೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಕದ್ರಿ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆಸಲಾಗಿದ್ದು, ಶರಣ್ ಪಂಪ್ ವೆಲ್ ಶೇರ್ ಮಾಡಿದ್ದ ಕಮೆಂಟ್ ಈಗಾಗಲೇ ಡಿಲೀಟ್ ಆಗಿದೆ. ವಿಕಾಸ್ ಎಂಬಾತ ಹಾಕಿದ್ದ ಕಮೆಂಟ್ ಅನ್ನು ಶರಣ್ ಪಂಪ್ ವೆಲ್ ಶೇರ್ ಮಾಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಕಮೀಷನರ್ ತಿಳಿಸಿದರು.
